ಅನುಷಾ ನಗರ, ಗುಲ್ಬರ್ಗ ಬಿಲ್ಡರ್ಸ್‌ ಮತ್ತು ಭಾರತ ನಗರ ಬಡಾವಣೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

08022021 Raichur Protest
Published on

ರಾಯಚೂರು: ನಗರದ ಅನುಷಾ ನಗರ, ಗುಲ್ಬರ್ಗ ಬಿಲ್ಡರ್ಸ್‌ ಮತ್ತು ಭಾರತ ನಗರ ಬಡಾವಣೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬಡಾವಣೆಗಳಲ್ಲಿ ಸೌಕರ್ಯಗಳಿಲ್ಲದೆ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಯಾವುದೇ ರಚನಾತ್ಮಕ ಕಾರ್ಯ ನಡೆದಿಲ್ಲ. ಬಡಾವಣೆಗಳಲ್ಲಿ ಒಳ ಚರಂಡಿ, ಶುದ್ಧ ಕುಡಿಯುವ ನೀರು, ಬೀದಿ ದೀಪ ಮತ್ತು ರಸ್ತೆ ಸೌಕರ್ಯಗಳಿಲ್ಲ. ಒಳಚರಂಡಿ ಕಾಮಗಾರಿ ಪ್ರಾರಂಭಿಸಿ ಅರ್ಧಕ್ಕೆ ನಿಲ್ಲಿಸಲಾಗಿದ್ದು, ಇದಕ್ಕಾಗಿ ತೋಡಲಾದ ತಗ್ಗುಗಳಲ್ಲಿ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಕೂಡಲೇ ಮೂರೂ ಬಡಾವಣೆಗಳಲ್ಲಿ ರಸ್ತೆ, ಒಳಚರಂಡಿ, ಬೀದಿ ದೀಪ ಮತ್ತಿತರ ಮೂಲ ಸೌಕರ್ಯ ಕಲ್ಪಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ನಗರಸಭೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net