ಈಶಾನ್ಯ ಶಿಕ್ಷಕರ ಮತ ಕ್ಷೇತ್ರ: ವಿಧಾನ ಪರಿಷತ್ ಚುನಾವಣೆಗೆ ಸಿದ್ಧತೆ

27102020 Raichur MLC Election
Published on

ರಾಯಚೂರು: ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಮತ ಕ್ಷೇತ್ರಕ್ಕೆ ಬುಧವಾರ ನಡೆಯಲಿರುವ ಮತದಾನಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ರಾಯಚೂರು ತಾಲೂಕಿನಲ್ಲಿ 5, ದೇವದುರ್ಗ ಮತ್ತು ಲಿಂಗಸುಗೂರು ತಾಲೂಕುಗಳಲ್ಲಿ ತಲಾ 4, ಮಾನ್ವಿ ತಾಲೂಕಿನಲ್ಲಿ 3 ಹಾಗೂ ಸಿಂಧನೂರಿನಲ್ಲಿ ಒಂದು ಮತಗಟ್ಟೆ ಸೇರಿ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಕೋವಿಡ್-19 ಕಾರಣ ಮತಗಟ್ಟೆಗಳನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 3,528 ಮತದಾರರಿದ್ದು, ಪ್ರತಿ ಮತಗಟ್ಟೆಗೆ ನಾಲ್ವರು ಮತಗಟ್ಟೆ ಅಧಿಕಾರಿಗಳು ಹಾಗೂ ಒಬ್ಬ ಡಿ ಗ್ರೂಪ್ ನೌಕರರನ್ನು ಚುನಾವಣೆ ಕಾರ್ಯಕ್ಕಾಗಿ ನೇಮಕ ಮಾಡಲಗಿದೆ. ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ಕಾರ್ಯ ನಡೆಯಲಿದೆ.

ಕೋವಿಡ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತದಾನ ಕೇಂದ್ರಗಳನ್ನು ಸ್ಯಾನಿಟೈಜೇಷನ್ ಮಾಡುವುದರ ಜತೆಗೆ ಪರಿಸ್ಪರ ಅಂತರ ಕಾಪಾಡುವ ನಿಟ್ಟಿನಲ್ಲಿ ಮತದಾರರು ನಿಲ್ಲಲು ಗುರುತು ಮಾಡಲಾಗಿದೆ. ಜತೆಗೆ ಸ್ಯಾನಿಟೈಜರ್ ವ್ಯವಸ್ಥೆ ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net