ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡಿ

03042023 raichur Abraham Honnatagi
Published on

ರಾಯಚೂರು: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡಬೇಕು. ಈ ಮೂಲಕ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಸಂಚಾಲಕ ಜೆ.ಅಬ್ರಾಹಂ ಹೊನ್ನಟಗಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮುದಾಯದ ಮತದಾರರಿದ್ದರೂ ಪ್ರಮುಖ ರಾಜಕೀಯ ಪಕ್ಷಗಳು ಸ್ಪಶ್ಯ ಜಾತಿಯವರಿಗೆ ಟಿಕೆಟ್ ನೀಡುತ್ತಿವೆ. ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರದಲ್ಲಿ 3.11 ಲಕ್ಷ ಮಾದಿಗ ಸಮುದಾಯದ ಮತದಾರರಿದ್ದು, ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ. ಉದ್ದೇಶಪೂರ್ವಕವಾಗಿ ಮಾದಿಗ ಸಮುದಾಯದವರಿಗೆ ಟಿಕೆಟ್ ತಪ್ಪಿಸಲಾಗುತ್ತಿದೆ ಎಂದು ಜೆ.ಅಬ್ರಾಹಂ ಹೊನ್ನಟಗಿ ದೂರಿದರು. ಪದಾಧಿಕಾರಿಗಳಾದ ಕೆ.ಪಿ.ಅನಿಲಕುಮಾರ, ರಾಘವೇಂದ್ರ ಬೋರೆಡ್ಡಿ, ಜಯಪ್ಪ, ನರಸಿಂಹಲು, ಮಲ್ಲೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net