20ರಂದು ಪ್ರೌಢಶಾಲೆ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ

17082022 lng
Published on

ಲಿಂಗಸುಗೂರು: ಪಟ್ಟಣದ ವಿಜಯ ಮಹಾಂತೇಶ್ವರ ಶಾಖಾನುಭವ ಮಂಟಪದಲ್ಲಿ ಪ್ರೌಢಶಾಲೆ ಶಿಕ್ಷಕರಿಗೆ ಆ.20 ರಂದು ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸಪ್ಪ ಹಂದ್ರಾಳ್ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶೇ.50 ಶಿಕ್ಷಕರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಒಒಡಿ ಸೌಲಭ್ಯ ಒದಗಿಸಲಾಗಿದೆ. ಕಾರ್ಯಾಗಾರ ಮುಗಿದ ಬಳಿಕ ಸಂಘದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಹಾಗೂ ನಿರ್ದೇಶಕರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಶಿಕ್ಷಕರಾದ ಚಿದಾನಂದ, ಪ್ರಭುಲಿಂಗ ಗದ್ದಿ, ಜಮದಗ್ನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net