

ರಾಯಚೂರು: ಮಾತೋ ಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ ವತಿಯಿಂದ ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ ಹದಿನೈದನೇ ವಾರ್ಷಿಕೋತ್ಸವದ ಹಿನ್ನೆಲೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಪ್ರತಿಭಾ ಗೋನಾಳ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ನ.24ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಚಿಕ್ಕಸುಗೂರು ಕೋಡಂಗಲ್ ಚೌಕಿ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ, ಸೋಮವಾರಪೇಟೆ ಹಿರೆಮಠದ ಅಭಿನವ ರಾಚೋಟಿ ವೀರಶೀವಾಚಾರ್ಯ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ವಿಜಯ ಮಹಾಂತ ಅನುಗ್ರಹ ಪ್ರಶಸ್ತಿ, ಮಹಾಂತ ಕಾಯಕಯೋಗಿ ಪ್ರಶಸ್ತಿ, ಶ್ರೀ ಗುರು ರಕ್ಷೆ ಪ್ರಶಸ್ತಿ, ಆದರ್ಶ ದಂಪತಿ ಪ್ರಶಸ್ತಿ, ಮಹಾಂತಶ್ರೀ ಪ್ರಶಸ್ತಿ, ಮಹಾಂತ ಪುರಸ್ಕಾರ ಪ್ರಶಸ್ತಿ, ಅತ್ಯುತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿ, ಅತ್ಯುತ್ತಮ, ಸೇವಾ ಸಂಸ್ಥೆ ಪ್ರಶಸ್ತಿಯನ್ನು ನಿಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶರಣಪ್ಪ ಗೋನಾಳ, ಪ್ರಮುಖರಾದ ಸಿದ್ದಯ್ಯ ಸ್ವಾಮಿ, ಎಲ್.ಜಿ.ಶಿವಕುಮಾರ ಸೇರಿದಂತೆ ಇತರರಿದ್ದರು.