ಪೌಷ್ಟಿಕತೆ ಕುರಿತು ಜಾಗೃತಿ ಅಗತ್ಯ

280922 Raichur Poshan conclusion
ರಾಯಚೂರಿನ ಡಿಸಿ ಕಚೇರಿ ಎದುರು ಪೋಷಣ್ ಅಭಿಯಾನ ಮಾಸಾಚರಣೆ ಸಮಾರೋಪದ ಅಂಗವಾಗಿ ಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ ಹಾಗೂ ಎಡಿಸಿ ಡಾ.ಕೆ.ಆರ್.ದುರಗೇಶ ಬುಧವಾರ ಹಸಿರು ನಿಶಾನೆ ತೋರಿಸಿದರು.
Published on

ರಾಯಚೂರು: ಅಪೌಷ್ಟಿಕತೆ ಅಂತಾರಾಷ್ಟ್ರೀಯ ಸಮಸ್ಯೆಯಾಗಿದ್ದು, ಪೌಷ್ಟಿಕಾಂಶದ ಕೊರತೆ ಬಡವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದ್ದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಪೋಷಕಾಂಶಯುಕ್ತ ಆಹಾರ ನೀಡಲು ಹಾಗೂ ಅದರ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ ಹೇಳಿದರು.

ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಬುಧವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಸಮಾರೋಪದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರಿಗೆ ಜಾಗೃತಿ ಅವಶ್ಯಕತೆಯಿದ್ದು, ಪೌಷ್ಟಿಕಾಂಶದ ಕೊರತೆ ನೀಗಿಸಲು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂಪೂರ್ಣ ಸಹಕಾರವಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಮಾತನಾಡಿ, ಜಿಲ್ಲೆಯನ್ನು ಮಹತ್ವಾಕಾಂಕ್ಷೆಯ ಜಿಲ್ಲೆಯೆಂದು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಪೌಷ್ಟಿಕತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪೌಷ್ಟಿಕ ಆಹಾರ ನೀಡುವುದು ಎಲ್ಲರ ಜವಾಬ್ದಾರಿ. ಅಂಗನವಾಡಿ ಕಾರ್ಯಕರ್ತೆಯರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net