ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಡಿ

21022022 Raichur Congress protest
Published on

ರಾಯಚೂರು ಜಿಲ್ಲೆಯ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆ | ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ರಾಯಚೂರು: ಸಚಿವ ಕೆ.ಎಸ್.ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ತಾಲೂಕಿನ ದೇವಸುಗೂರು ಗ್ರಾಮದ ನಾಡ ಕಚೇರಿ ಎದುರು ದೇವಸುಗೂರು ಬ್ಲಾಕ್ ಕಾಂಗ್ರೆಸ್‌ನಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಕೆಂಪು ಕೋಟೆ ಮೇಲೆ ಕೇಸರಿ ಧ್ವಜಾರೋಹಣ ಮಾಡುವ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಚಿವ ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net