ಸಾಧನೆಗೆ ಶಿಕ್ಷಕರ ಕೊಡುಗೆ ಅಪಾರ; ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿಕೆ

24092022 raichur teachers day
Published on

ಕುಸ್ಮಾದಿಂದ ಸನ್ಮಾನ ಸಮಾರಂಭ

ರಾಯಚೂರು: ಸಾಧನೆ ಹಿಂದೆ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಮಗಮಂದಿರದಲ್ಲಿ ಕುಸ್ಮಾ ಒಕ್ಕೂಟದಿಂದ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಅಂಗವಾಗಿ ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ಖಾಸಗಿ ಶಾಲೆಗಳ ಶಿಕ್ಷಕರನ್ನು ಅತಿ ಹೆಚ್ಚಾಗಿ ಸನ್ಮಾನಿಸುವುದು ರಾಯಚೂರಿನಲ್ಲಿ. ಸ್ಪರ್ಧೆ ಇರುವ ಕಡೆಗಳಲ್ಲಿ ಗುಣಮಟ್ಟದ ಶಿಕ್ಷಣವಿರುತ್ತದೆ. ಆದ್ದರಿಂದ ಎಲ್ಲ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದರು.

ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಭೇಂದ್ರಯ್ಯ ಮಾತನಾಡಿ, ಶಿಕ್ಷಕರಿಗೆ ಸನ್ಮಾನಿಸುವುದರಿಂದ ಪ್ರೇರಣೆ ಸಿಗುತ್ತದೆ. ಈ ನಿಟ್ಟಿನಲ್ಲಿ ಕುಸ್ಮಾದಿಂದ ಶಿಕ್ಷಕರಿಗೆ ಪ್ರೋತ್ಸಾಹಿಸಲಾಗುತ್ತಿದೆ. ಶಿಕ್ಷಕರಿಗೆ ಸೇವಾ ಭದ್ರತೆಯ ಅವಶ್ಯಕತೆಯಿದೆ. ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net