ಎಕರೆಗೆ 40 ಸಾವಿರ ರೂ. ಪರಿಹಾರ ಕೊಡಿ

Formers protest
ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ನರಸಿಂಹ ನಾಯಕ, ಪದಾಧಿಕಾರಿಗಳಾದ ಈರಣ್ಣ ಸಿದ್ರಾಂಪುರ, ಶಿವಪ್ಪ ನಾಯಕ, ಸಂಗಮೇಶ ನಾಯಕ, ತಮ್ಮಣ್ಣ ಇದ್ದರು.
Published on


ರಾಯಚೂರು: ಮುಂಗಾರು ಮಳೆ ವೈಫಲ್ಯದಿಂದಾಗಿ ರೈತರು ಬಿತ್ತನೆ ಮಾಡಲು ಸಾಧ್ಯವಾಗದಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಸಂಘದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿ, ರೈತರಿಗೆ ನಷ್ಟ ಪರಿಹಾರವಾಗಿ ಪ್ರತಿ ಎಕರೆಗೆ 40 ಸಾವಿರ ರೂ. ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ತಡವಾಗಿ ಬಿತ್ತನೆ ಮಾಡುವುದರಿಂದ ಹತ್ತಿ, ತೊಗರಿ ನಾಟಿ ಮಾಡಿದರೂ ಮೊಳಕೆ ಬರುವುದಿಲ್ಲ. ರೋಗ ಮತ್ತು ಕೀಟಭಾದೆಯಿಂದ ಬೆಳೆ ಹಾನಿಗೊಳಗಾಗುವ ಸಂಭವ ಹೆಚ್ಚಾಗಿರುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net