

ರಾಯಚೂರು: ಮಹಿಳೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುದಗಲ್ ತಾಲೂಕಿನ ಕಚಾಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ಹುಸೇನ್ ಬೀ(32) ಕೊಲೆಯಾದ ಮಹಿಳೆ. ಕಚಾಪುರ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ ಮಾಡಲಾಗಿದೆ ಎಂದು ಮೃತಳ ಪತಿ ಮಹ್ಮದ್ ರಫೀ ನೀಡಿದ ದೂರಿನನ್ವಯ ಮುದಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಎಂ.ಪುಟ್ಟಮಾದಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.