ಫುಟ್‌ಪಾತ್ ಮೇಲೆ ವ್ಯಾಪಾರ ನಿಷೇಧ: ಪೌರಾಯುಕ್ತ ಗುರುಸಿದ್ದಯ್ಯ ಸೂಚನೆ

CMC commissioner
ಗುರುಸಿದ್ದಯ್ಯ ಹಿರೆಮಠ
Published on

ರಾಯಚೂರು: ನಗರದ ಎಲ್ಲ ಉದ್ಯಮದಾರರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಎಚ್ಚರವಹಿಸಬೇಕು ಒಂದು ವೇಳೆ ಪ್ಲಾಸ್ಟಿಕ್ ಮಾರಾಟ, ಬಳಕೆ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ದಂಡ ವಿಧಿಸಲಾಗುವುದು ಎಂದು ರಾಯಚೂರು ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೆಮಠ ಸೂಚನೆ ನೀಡಿದ್ದಾರೆ.

ಮುಖ್ಯರಸ್ತೆಗಳ ಫುಟ್‌ಪಾತನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವುದು ನಿಯಮಗಳ ಉಲ್ಲಂಘನೆಯಾಗಿದ್ದು, ಕೂಡಲೇ ಫುಟ್‌ಪಾತ್ ಮೇಲೆ ವ್ಯಪಾರ ಮಾಡುವವರು ಅಂಗಡಿಗಳನ್ನು ತೆರವುಗೊಳಿಸಬೇಕು.

ನಗರದಲ್ಲಿ ಪ್ಲಾಸ್ಟಿಕ್ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ಹಾಗೂ ಪಿಒಪಿ ಗಣೇಶ ಮೂರ್ತಿಗಳ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸುವುದಲ್ಲದೇ 25 ಸಾವಿರದಿಂದ 2.5 ಲಕ್ಷ ದಂಡ ವಿಧಿಸಲಾಗುವುದು ಎಂದು ಗುರುಸಿದ್ದಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net