ಏಳು ತಿಂಗಳ ವೇತನ ಶೀಘ್ರ ಪಾವತಿಸಿ

CMC DAILY WAGES EMPLOYEES SUBMIT MEEMONDRUM M TO DC OFFICE AND CMC (1)
Published on

ರಾಯಚೂರು: ನಗರಸಭೆಯಲ್ಲಿ ವಾಲ್ವ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಬಾಕಿ ವೇತನ ಪಾವತಿ ಮಾಡುವಂತೆ ನಗರಸಭೆ ದಿನಗೂಲಿ ನೌಕರರ ಸಂಘದಿಂದ ನಗರದ ಟಿಪ್ಪು ಸುಲ್ತಾನ ಉದ್ಯಾನದಲ್ಲಿ ನಗರಸಭೆ ವ್ಯವಸ್ಥಾಪಕ ರಾಜುಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ರಾಯಚೂರು ನಗರಸಭೆಯ ನೀರು ಸರಬರಾಜು ವಿಭಾಗದಲ್ಲಿ 43 ಜನ ವಾಲ್ ಆಪರೇಟರ್‌ಗಳಿದ್ದು, ಏಪ್ರಿಲ್ ತಿಂಗಳಿನಿಂದ ಯಾರಿಗೂ ವೇತನ ಪಾವತಿಯಾಗದೇ ಸಿಬ್ಬಂದಿಗಳಿಗೆ ಬದುಕು ನಡೆಸುವುದು ಕಷ್ಟವಾಗಿದೆ. ಈ ಬಗ್ಗೆ ಈಗಾಗಲೇ ನಗರಸಭೆ ಪೌರಾಯುಕ್ತರ ಗಮನಕ್ಕೆ ತಂದಿದ್ದು, ಆದರೂ ಯಾವುದೇ ಕ್ರಮವಾಗಿಲ್ಲ. ಕೂಡಲೇ ಏಳು ತಿಂಗಳ ಬಾಕಿ ವೇತನವನ್ನು ಪಾವತಿ ಮಾಡಲು ನಗರಸಭೆ ಮುಂದಾಗಬೇಕು ಇಲ್ಲವಾದಲ್ಲಿ ನಗರಸಭೆ ಕಚೇರಿ ಮುಂದೆ ಅನಿರ್ಧಿಷ್ಠಾವಧಿ ಧರಣಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ಪಿ.ಅನಿಲ್‌ಕುಮಾರ, ಉಪಾಧ್ಯಕ್ಷ ಎಸ್.ರಾಜು, ಪ್ರಧಾನ ಕಾರ್ಯದರ್ಶಿ ಜನಾರ್ಧನ ಹಳ್ಳಿಬೆಂಚಿ, ಪ್ರಮುಖರಾದ ಸಾಬಣ್ಣ, ಲಕ್ಷ್ಮಣ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net