ಮುನ್ನೂರು ಕಾಪು ಸಮಾಜದಿಂದ ಪರಂಪರೆ ರಕ್ಷಣೆ: ನರಸಮ್ಮ ಮಾಡಗಿರಿ

IMG-20241003-WA0011
Published on

ರಾಯಚೂರು: ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಮುನ್ನೂರು ಕಾಪು ಸಮಾಜ ಸಾಂಸ್ಕೃತಿಕ‌ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ ಹೇಳಿದರು.

ನಗರದ ಗದ್ವಾಲ್ ರಸ್ತೆಯ ಶ್ರೀ ಲಕ್ಷ್ಮಮ್ಮ ಮತ್ತು ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಮುನ್ನೂರು ಕಾಪು ಸಮಾಜದಿಂದ ಹಮ್ಮಿಕೊಂಡಿದ್ದ ನವರಾತ್ರಿ ಉತ್ಸವದ ಮೊದಲ ದಿನದ ಸಾಂಸ್ಕೃತಿಕ‌ ಕಾರ್ಯಕ್ರಮವನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು.

ಮುನ್ನೂರುಕಾಪು ಸಮಾಜ ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಪರಂಪರೆಯನ್ನು ರಕ್ಷಣೆ ಮಾಡುತ್ತಿದೆ. ಮುಂಗಾರು ಸಾಂಸ್ಕೃತಿಕ‌ ಹಬ್ಬದ ನಂತರ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಜಿಲ್ಲೆ ಸೇರಿ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಮುನ್ನೂರು ಕಾಪು ಸಮಾಜ ಎ.ಪಾಪಾರೆಡ್ಡಿ ಅವರ ನೇತೃತ್ವದಲ್ಲಿ ಬಲಿಷ್ಠ ಸಮಾಜವಾಗಿ ಗುರುತಿಸಿಕೊಂಡಿದೆ. ಸಮಾಜ ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ್ಯದಲ್ಲಿ ಭಾರೀ ಜನಮನ್ನಣೆ ಪಡೆದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಎ.ಪಾಪಾರೆಡ್ಡಿ, ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ನಗರಸಭೆ ಉಪಾಧ್ಯಕ್ಷ ಸಾಜೀದ್ ಸಮೀರ್, ಸಾಹಿತಿ ಅಯ್ಯಪ್ಪಯ್ಯ ಹುಡಾ, ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net