ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ ಅಧಿಕಾರ ಸ್ವೀಕಾರ

Dr B C Satisha Raichur New DC 230721
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೂತನ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಬಿ.ಸಿ.ಸತೀಶ.
Published on

ರಾಯಚೂರು: ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ, ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಹಿಂದಿನ ಡಿಸಿಯಾಗಿದ್ದ ಆರ್.ವೆಂಕಟೇಶ ಕುಮಾರರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಮೂಲದ ಡಾ.ಬಿ.ಸಿ.ಸತೀಶ, 2012ರ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿದ್ದು, 2018ರಲ್ಲಿ ಐಎಎಸ್ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ. ಯಾದಗಿರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ಜಲ ಮಂಡಳಿ ಆಯುಕ್ತರಾಗಿ ಹಾಗೂ ಧಾರವಾಡ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಾಮಾಣಿಕ ಪ್ರಯತ್ನ: ಡಿಸಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಬಿ.ಸಿ.ಸತೀಶ, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಕೆಲಸ ಮಾಡಿರುವುದರಿಂದ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿಯಿದೆ. ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜತೆಗೆ ಜಿಲ್ಲಾಧಿಕಾರಿ ಹುದ್ದೆಯ ಕರ್ತವ್ಯವನ್ನು ಶ್ರದ್ಧೆ, ನಿಷ್ಠೆಯಿಂದ ಮಾಡುವುದಾಗಿ ಹೇಳಿದರು. ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net