ಆ.19ಕ್ಕೆ ನುಲಿಯ ಚಂದಯ್ಯ ಜಯಂತಿ: ಹುಲಿಗೆಪ್ಪ

Huligeppa
ಹುಲಿಗೆಪ್ಪ
Published on

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಳುವ ಮಹಾಸಂಘದಿಂದ ನುಲಿಯ ಚಂದಯ್ಯನವರ 917ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸಹ ಕಾರ್ಯದರ್ಶಿ ಹುಲಿಗೆಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಆ.19ರಂದು ಬೆಳಿಗ್ಗೆ 9.30 ಕ್ಕೆ ನಗರದ ಟಿಪ್ಪು ಸುಲ್ತಾನ್ ಉದ್ಯಾನದಿಂದ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದವರೆಗೆ ನುಲಿಯ ಚಂದಯ್ಯ ಭಾವಚಿತ್ರವನ್ನು ಮೆರವಣಿಗೆ ಮಾಡಲಾಗುವುದು ನಂತರ ರಂಗಮಂದಿರದಲ್ಲಿ 11 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನುಲಿಯ ಚಂದಯ್ಯ 12ನೇ ಶತನಮಾನದ ದಾರ್ಶನಿಕ, ಬಸವಾದಿ ಶರಣ ಸಮೂಹದ ವಚನಕಾರನಾಗಿದ್ದು, ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. 19ರಂದು ನಡೆಯುವ ಜಯಂತಿ ಕಾರ್ಯಕ್ರಮಕ್ಕೆ ಕೊರಮ, ಕೊರಚ, ಕುಳುವ, ಮತ್ತು ಭಜಂತ್ರಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಈರಣ್ಣ, ಮಾಲಾಭಜಂತ್ರಿ, ಬಜಾರಪ್ಪ, ನರಸಿಂಹಲು, ಆಂಜನೇಯ್ಯ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net