ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸಿ

01082022 raichur protest
Published on

ರಾಯಚೂರು: ವೀರಶೈವ ಲಿಂಗಾಯತ ಸಮುದಾಯದಲ್ಲಿನ ಪಂಗಡಗಳನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಇತರ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸಲಾಗಿದ್ದರೂ, ಕರ್ನಾಟಕದಲ್ಲಿ ಮಾತ್ರ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಸಮುದಾಯ ಬಹುತೇಕ ಕೃಷಿ ಮತ್ತು ಕೃಷಿ ಆಧಾರಿತ ಕಸಬುಗಳ ಮೇಲೆ ಅವಲಂಬಿತವಾಗಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ತೀರಾ ಹಿಂದುಳಿದೆ. ಆದರೆ ಒಬಿಸಿ ಪಟ್ಟಿಯಲ್ಲಿ ಸೇರಿಸದಿರುವುದರಿಂದ ಸರ್ಕಾರದ ಸೌಲಭ್ಯಗಳು ದೊರೆಯದಂತಾಗಿದೆ. ಕೂಡಲೇ ಪಟ್ಟಿಯಲ್ಲಿ ಸೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net