ಸೆ.10ರಂದು ರಂಗಸಿರಿಯಿಂದ ಸಂಗೀತ ನೃತ್ಯೋತ್ಸವ

Rangaswamy Rangasiri Balaga Raichur
ರಂಗಸ್ವಾಮಿ.
Published on

ರಾಯಚೂರು: ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೆ.10ರಂದು ಸಂಗೀತ ನೃತ್ಯೋತ್ಸವ ಹಾಗೂ ರಂಗಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಂಗಸಿರಿ ಸಾಂಸ್ಕೃತಿಕ ಕಲಾ ಬಳಗದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದರು.

ಖ್ಯಾತ ಕಲಾವಿದರಿಂದ ವಚನ, ಭಕ್ತಿಗೀತೆ, ಜಾನಪದ, ಶಾಸ್ತ್ರೀಯ, ಭಾವಗೀತೆ ಗಾಯನ ಹಾಗೂ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗುರುವಾರ ಸುದಿಗೋಷ್ಠಿಯಲ್ಲಿ ಹೇಳಿದರು. ಕಲಾವಿದರಾದ ಅಣವೀರಯ್ಯಸ್ವಾಮಿ, ಪಿ.ಸಿದ್ಧಲಿಂಗಪ್ಪ ನಾಗೋಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net