25ಕ್ಕೆ ಸಿಪಿಐಎಂಎಲ್ ರಾಜ್ಯ ಸಮಾವೇಶ

B Rudrayya CPIML Raichur
ಬಿ.ರುದ್ರಯ್ಯ.
Published on

ರಾಯಚೂರು: ಆರ್‌ಎಸ್‌ಎಸ್, ಬಿಜೆಪಿ ಕಾರ್ಯವೈಖರಿ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ನಗರದಲ್ಲಿ ಡಿ.25ರಂದು ಸಿಪಿಐಎಂಎಲ್‌ದಿಂದ ರಾಜ್ಯ ಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಫ್ಯಾಸಿಸ್ಟ್ ಆಡಳಿತ ಧೋರಣೆ ವಿರುದ್ಧ ಹಾಗೂ ರಾಜ್ಯದಲ್ಲಿ ಐಕ್ಯತೆ ನಿರ್ಮಿಸುವ ಉದ್ದೇಶದಿಂದ ಪಕ್ಷದಿಂದ ಈಗಾಗಲೇ ರಾಜಕೀಯ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಜನರಲ್ಲಿ ದ್ವೇಷವನ್ನು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇವುಗಳ ವಿರುದ್ಧ ಹೋರಾಟ ರೂಪಿಸುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಸಮಿತಿ ಕಾರ್ಯದರ್ಶಿ ಪಿ.ಜೆ.ಜೇಮ್ಸ್ ಪಾಲ್ಗೊಳ್ಳಲಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಡಿ.ಎಚ್.ಪೂಜಾರ, ಕೆ.ಬಿ.ಗೋನಾಳರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಬಿ.ರುದ್ರಯ್ಯ ತಿಳಿಸಿದರು. ಪದಾಧಿಕಾರಿಗಳಾದ ಜಿ.ಅಮರೇಶ, ಎಂ.ಡಿ.ಅಮೀರ ಅಲಿ, ಎಂ.ಗಂಗಾಧರ, ರವಿ ದಾದಾಸ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net