ಆನ್‌ಲೈನ್ ಗೇಮಿಂಗ್‌, ಬೆಟ್ಟಿಂಗ್‍ಗೆ ಕಡಿವಾಣ ಹಾಕಿ: ಕೊಂಡಪ್ಪ

NAMMA KARNATAKA SENE PRESS MEET (1)
Published on

ರಾಯಚೂರು: ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳಿಂದ ಸಮಾಜ ಹಾಳಾಗುತ್ತಿದ್ದು, ಈ ಗೇಮ್‌ಗಳ ಬಗ್ಗೆ ಸರ್ಕಾರ ಹೆಚ್ಚಿನ ಗಮನ ಹರಿಸಿ ನಿಷೇಧ ಮಾಡಲು ಮುಂದಾಗಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಕೆ.ಕೊಂಡಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳಿಂದ ಅನಾಹುತಗಳು ಸಂಭವಿಸುತ್ತಿದ್ದು, ಇದೊಂದು ಚಟವಾಗಿ ಬೆಳೆದಿದೆ. ಆರ್ಥಿಕ ನಷ್ಟ ಅನುಭವಿಸಿದ ಕುಟುಂಬಗಳು ಬೀದಿಗೆ ಬಂದಿವೆ. ಈ ಗೇಮ್‌ಗಳಿಂದ ವಿದ್ಯಾರ್ಥಿಗಳು, ಯುವಕರು ಆತ್ಮಹತ್ಯೆಗೆ ಮುಂದಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳನ್ನು ನಿಷೇಧಿಸುವ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.

ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಬೆಟ್ಟಿಂಗ್ ವ್ಯವಸ್ಥೆಯನ್ನು ನಡೆಸುತ್ತಿದ್ದ ಆನ್‌ಲೈನ್ ಬುಕ್ಕಿಗಳ ಮೇಲೆ ಎಫ್‌ಐಆರ್‌ಗಳು ದಾಖಲಾಗಿದ್ದು, ಇವುಗಳಿಂದಾಗುವ ಅನಾಹುತಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಎಂ.ಎಸ್ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷ ಮಹೇಶ ಪಾಟೀಲ್, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ವೀರೇಶ ಜಲಗಾರ, ಯುವ ಘಟಕದ ಜಿಲ್ಲಾಧ್ಯಕ್ಷ ವಿಜಯ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net