

ರಾಯಚೂರು: ಆಸ್ಪತ್ರೆಯ ರೋಗಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಜಾವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಡಿಸಿ ಕೆ.ನಿತೀಶ ಸೂಚನೆ ನೀಡಿದರು.
ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಒಪೆಕ್)ಗೆ ಬುಧವಾರ ದೀಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿರುವ ಮೂಲಭೂತ ಸೌಕರ್ಯಗಳು ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿ ನಂತರ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಭೆಯಲ್ಲಿ ಮಾತನಾಡಿದರು.
ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಮರ್ಪಕವಾಗಿ ಔಷಧಿ ಮತ್ತು ಸಿಬ್ಬಂದಿಯಿಂದ ವೈದ್ಯಕೀಯ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಗೆ ವೈದ್ಯರು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಹಾಜರಾಗುವಂತೆ ನೊಡಿಕೊಳ್ಳಬೇಕು ಜತೆಗೆ ಆಸ್ಪತ್ರೆಯ ಅಭಿವೃದ್ಧಿಗೆ ಬೇಕಾದ ಯೋಜನೆಯನ್ನು ಸಿದ್ಧಪಡಿಸಿಕೊಳ್ಳುವಂತೆ ತಿಳಿಸಿದರು.
ಒಪೆಕ್ ಆಸ್ಪತ್ರೆ ಅಭಿವೃದ್ಧಿ ಜಿಲ್ಲಾಡಳಿತ ಸಹಕರಿಸಲಿದೆ. ಇಲ್ಲಿರುವ ವೈದ್ಯರು ತಮ್ಮ ವಿಭಾಗದಲ್ಲಿ ಮಾಡಬೇಕಾದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ರಿಮ್ಸ್ ಮುಖ್ಯ ಆಡಳಿತಾಧಿಕಾರಿ ಡಾ.ಕೆ.ಆರ್ ದುರುಗೇಶ, ಒಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಾಗರ, ಡಿಎಚ್‌ಒ ಡಾ.ಸುರೇಂದ್ರಬಾಬು, ಸವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ವೈದ್ಯರಾದ ಡಾ.ಸುರೇಶ ಸಗರದ್, ಡಾ.ವಿಶ್ವನಾಥನರೆಡ್ಡಿ, ಡಾ.ಸಂದೀಪ, ಡಾ.ಗೋಪಿನಾಥ, ಡಾ.ಎಸ್.ರಾಘವೇಂದ್ರ ಸೇರಿದಂತೆ ಇತರರಿದ್ದರು.