ತೈಲ, ಅಗತ್ಯವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲು ಒತ್ತಾಯಿಸಿ ಜಾತ್ಯತೀತ ಜನತಾದಳ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

22062021 Raichur JDS protest
Published on

ರಾಯಚೂರು: ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಜೆಡಿಎಸ್ ಅಡುಗೆ ಅನಿಲ ಸಿಲೆಂಡರ್ ಮತ್ತು ಅಗತ್ಯವಸ್ತುಗಳನ್ನಿಟ್ಟು ಮಂಗಳವಾರ ಪ್ರತಿಭಟನೆ ನಡೆಸಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಗಳಿಂದ ಜನ ಸಾಮಾನ್ಯರಿಗೆ ಆರ್ಥಿಕ ಹೊರೆಯುಂಟಾಗಿದ್ದು, ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಬೇಕು. ತೈಲ ಮತ್ತು ಅಗತ್ಯ ಬೆಲೆ ಏರಿಕೆ ನೀತಿಯನ್ನು ಬಿಟ್ಟು ಸರ್ಕಾರ ಲಾಕ್‌ಡೌನ್‌ನಿಂದ ಬೀದಿ ಪಾಲಾಗಿರುವ ಕುಟುಂಬಗಳ ನೆರವಿಗೆ ಧಾವಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net