ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಪ್ರತಿಭಟನೆ

IMG-20240831-WA0031
Published on

ರಾಯಚೂರು: ಪಿಂಜಾರ, ನದಾಫ್ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಹಕ್ಕುಗಳ ಸಂಘದಿಂದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆಯುಳ್ಳ ಪಿಂಜಾರ್ ನದಾಫ್ ಜನಾಂಗವು ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಜನಾಂಗವಾಗಿದೆ. ಜನಾಂಗವು ಪ್ರವರ್ಗ 1ರಲ್ಲಿ ಬಂದರೂ ಸರ್ಕಾರದ ಯಾವ ಯೋಜನೆಯ ಸೌಲಭ್ಯಗಳು ಸಿಗುತ್ತಿಲ್ಲ. ಹಿಂದೆ ಇದ್ದ ರಾಜ್ಯ ಬಿಜೆಪಿ ಸರ್ಕಾರ ಪಿಂಜಾರ್ ನದಾಫ್ ಜನಾಂಗ ಸೇರಿ 13 ಜನಾಂಗಗಳ ಪ್ರತ್ಯೇಕ ಅಭಿವೃದ್ಧಿ ಸ್ಥಾಪಿಸುವ ಘೋಷಣೆಯನ್ನು ಮಾಡಿತ್ತು.

ಆದರೆ ಈವರೆಗೂ ಜನಾಂಗದ ಅಭಿವೃದ್ಧಿ ನಿಗಮದ ಸ್ಥಾಪನೆ ಕುರಿತು ಕ್ರಮ ಕೈಗೊಳ್ಳುತ್ತಿಲ್ಲ ಆದ್ದರಿಂದ ಕೂಡಲೇ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದು ಡಿಸಿ ಕಚೇರಿಯ ಸ್ಥಾನಿಕ ಅಧಿಕಾರಿ ವೇಣುಮಾದವಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಇಮ್ರಾನ್ ಬಡೇಸಾಬ್, ಮಹಿಳಾ ಜಿಲ್ಲಾಧ್ಯಕ್ಷೆ ಕಾಸಿಂಬೀ, ಪ್ರಮುಖರಾದ ಯಾಕೂಬ್, ಶಾಲಂ ಸಾಬ್, ಮಹೆಬೂಬ್, ಶಫಿ, ಜಮೀರ್, ಮಹ್ಮದ್ ರಫಿ, ಹುಸೇನ್ ಬಾಷಾ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net