

ರಾಯಚೂರು : ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರೊನಾ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಸ್ಥಳೀಯ ಜಿಲ್ಲಾ ಕಾರಾಗೃಹದಲ್ಲಿದ್ದ ಐವರು ವಿಚಾರಾಣಾಧೀನ ಕೈದಿಗಳನ್ನು ಶನಿವಾರ ಬಿಡುಗಡೆ ಮಾಡಲಾಯಿತು.
ಅಪರ ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ಇತ್ತೀಚೆಗೆ ಜರುಗಿದ್ದ ಸಭೆಯಲ್ಲಿ ಒಟ್ಟು 9 ವಿಚಾರಾಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿತ್ತು. ಅದರಂತೆ ಕೆಲವು ದಿನಗಳ ಹಿಂದೆ ಮೂವರನ್ನು ಜೈಲಿನಿಂದ ಬಿಡುಗಡೆ ಮಾಡಿ ಕಳುಹಿಸಲಾಗಿತ್ತು.
ಎರಡನೇ ಹಂತದಲ್ಲಿ ಐವರನ್ನು ಶನಿವಾರ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ಮತ್ತೊಬ್ಬ ಕೈದಿಯ ಬಿಡುಗಡೆಯನ್ನು ರಿಜೆಕ್ಟ್ ಮಾಡಲಾಗಿದೆ. ಕೈದಿಗಳು ಬಿಡುಗಡೆಯಾಗಿ ಹೊರಬರುತ್ತಿದ್ದಂತೆ ಅವರ ಕುಟುಂಬ ವರ್ಗದವರು ಸಂತಸದಿಂದ ಬರಮಾಡಿಕೊಂಡರು.