ಖಾಸಗಿ ಶಾಲಾ ಶಿಕ್ಷಕರಿಗೂ ಪ್ರಶಸ್ತಿ ನೀಡಿ: ಲೇಪಾಕ್ಷಿ

oplus_2
oplus_2
Published on

ರಾಯಚೂರು: ಖಾಸಗಿ ಶಾಲೆಗಳಿಗೆ ಸರ್ಕಾರದ ಇಬ್ಬಗೆಯ ನೀತಿಗಳ ತೊಂದರೆ ಉಂಟಾಗುತ್ತಿದೆ ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ರಾಜ್ಯಾಧ್ಯಕ್ಷ ಹಾಲನೂರು ಲೇಪಾಕ್ಷಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಸರ್ಕಾರ ಪ್ರತಿವರ್ಷ ಆಚರಿಸಲಾಗುವ ಶಿಕ್ಷಕರ ದಿನಾಚರಣೆಯಲ್ಲಿ ಕೇವಲ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಮಾತ್ರ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿದ್ದು, ಖಾಸಗಿ ಶಾಲಾ ಶಿಕ್ಷಕರಿಗೂ ಈ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದರು.

ಶಿಕ್ಷಕರ ದಿನಾಚರಣೆಗಾಗಿ ಪ್ರತಿವರ್ಷ ಖಾಸಗಿ ಶಾಲಾ ಶಿಕ್ಷಕರಿಂದ ಸ್ಟಾೃಂಪ್ ಹೆಸರಿನಲ್ಲಿ ಹಣ ಪಡೆಯುತ್ತಿದ್ದು, ಆದರೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮಾತ್ರ ಕೇವಲ ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದಲ್ಲದೇ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಅಗ್ನಿ ಅವಘಡದ ಸುರಕ್ಷತೆಯ ಕ್ರಮಗಳು ಹಾಗೂ ಕಟ್ಟಡ ಸುಸ್ಥಿತಿಯಲ್ಲಿರಬೇಕೆಂದು ಆದೇಶಿಸಿರುವ ಸರ್ಕಾರ ಸರ್ಕಾರಿ ಶಾಲೆಗಳಲ್ಲಿಯೂ ಈ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಆದೇಶ ಹೊರಡಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದರು.

ಕೂಡಲೇ ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೂ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಬೇಕು ಸರ್ಕಾರಿ ಶಾಲೆಗಳಿಗೂ ಖಾಸಗಿ ಶಾಲೆಗಳಿಗೆ ನೀಡಿದ ಕಾನೂನುಗಳನ್ನು ಅನುಸರಿಸಲು ಆದೇಶಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಶಶಿಧರ ದಿಂಡೂರ್, ಜಿ.ಎಂ ಕೊಟ್ರೇಶ, ವಿನಯ್ ಪಾಟೀಲ್, ಸಂಗಮೇಶ, ಜಂಗ್ಲಪ್ಪ, ಶಿವಕುಮಾರ, ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net