ಮುಂಬಡ್ತಿಯೊಂದಿಗೆ ವೇತನ ಪರಿಷ್ಕರಣೆ ಮಾಡಿ

191122 Raichur State Community Health Employees Association Protest
ರಾಯಚೂರಿನಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
Published on

ರಾಯಚೂರು: ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕಾಯಂಗೊಳಿಸಬೇಕು. 15 ಸಾವಿರ ರೂ. ಪ್ರೋತ್ಸಾಹಧನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ 2016-17ನೇ ಸಾಲಿನಿಂದ ಸೇವೆ ಸಲ್ಲಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಂಬಡ್ತಿಗೆ ಅವಕಾಶ ಕಲ್ಪಿಸಬೇಕು. ಕೇಂದ್ರ ಸರ್ಕಾರದ ಸುತ್ತೋಲೆಯಂತೆ ವೇತನ ಪರಿಷ್ಕರಣೆ ಮಾಡಬೇಕು. ಪ್ರಸ್ತುತ 8 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅದನ್ನು 15 ಸಾವಿರ ರೂ.ಗೆ ಹೆಚ್ಚಳ ಮಾಡಬೇಕು. ಅಧಿಕಾರಿಗಳನ್ನು ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಮಾಡಬೇಕು. ಅಧಿಕಾರಿಗಳ ಸಮಿತಿ ರಚಿಸಿ ಕುಂದುಕೊರತೆ ಆಲಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net