ಪ್ರಾಂತ ರೈತ ಸಂಘದ ಸಮ್ಮೇಳನ ಅ.14ರಿಂದ

D. Veerana Gowda, District President, Karnataka Provincial Farmers Association
ಡಿ.ವೀರನಗೌಡ, ಜಿಲ್ಲಾಧ್ಯಕ್ಷ, ಕರ್ನಾಟಕ ಪ್ರಾಂತ ರೈತ ಸಂಘ.
Published on

ರಾಯಚೂರು: ನಗರದಲ್ಲಿ ಅ.14ರಿಂದ 16ವರೆಗೆ ಕರ್ನಾಟಕ ಪ್ರಾಂತ ರೈತ ಸಂಘದ 17ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಿ.ವೀರನಗೌಡ ತಿಳಿಸಿದರು.

ಪ್ರಮುಖವಾಗಿ ಭೂಮಿ, ಬಿತ್ತನೆ ಬೀಜ, ರಸಗೊಬ್ಬರ, ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಿ ನಿರ್ಣಯಗೊಂಡು ಸರ್ಕಾರಕ್ಕೆ ಹಕ್ಕೋತ್ತಾಯ ಸಲ್ಲಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಅ.14ರಂದು ಸಾರ್ವಜನಿಕ ಉದ್ಯಾನದಿಂದ ಮೆರವಣಿಗೆ ಆರಂಭಿಸಲಾಗುತ್ತಿದ್ದು, ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿ ಬಹಿರಂಗ ಸಮಾವೇಶ ಆಯೋಜಿಸಲಾಗಿದೆ. ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷ ಅಶೋಕ ಧಾವಳೆ, ಪ್ರಧಾನ ಕಾರ್ಯದರ್ಶಿ ಹನನ್ ಮುಲ್ಲಾ, ಜಂಟಿ ಕಾರ್ಯದರ್ಶಿ ಡಾ.ವಿಜುಕೃಷ್ಣನ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪದಾಧಿಕಾರಿಗಳಾದ ಕೆ.ಜಿ.ವೀರೇಶ, ಡಿ.ಎಸ್.ಶರಣಬಸವ, ಮಹಾಂತಪ್ಪಗೌಡ, ಖಾಜಾ ಅಸ್ಲಾಂ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net