ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿದ ಐವರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

24112021 raichur MLC candidate fix
Published on


ರಾಯಚೂರು: ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಐವರು ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 12 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ಡಾ.ಅವಿನಾಶ ಮೆನನ್ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಹಾಗೂ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಸಲ್ಲಿಸಿದ್ದ ತಲಾ 4 ನಾಮಪತ್ರ, ಜನಹಿತ ಪಕ್ಷದ ಅಭ್ಯರ್ಥಿಯಾಗಿ ತಿರುಪತಿ ಸಲ್ಲಿಸಿದ್ದ 2 ನಾಮಪತ್ರ, ಪಕ್ಷೇತರ ಅಭ್ಯರ್ಥಿಗಳಾದ ದೊಡ್ಡಬಸನಗೌಡ ಮತ್ತು ನರೇಂದ್ರ ಆರ್ಯರ ನಾಮಪತ್ರಗಳು ಕ್ರಮಬದ್ಧವಾಗಿವೆ.

ನಾಮಪತ್ರ ಹಿಂಪಡೆಯಲು ನ.26 ಕೊನೇ ದಿನವಾಗಿದ್ದು, ಅಂದು ಮಧ್ಯಾಹ್ನ 3ರೊಳಗೆ ನಾಮಪತ್ರ ವಾಪಸ್ ಪಡೆಯಬಹುದಾಗಿದೆ ಎಂದು ಡಾ.ಅವಿನಾಶ ಮೆನನ್ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಶಿರಸ್ತೇದಾರ್ ಸೂಗೂರೇಶ ದೇಸಾಯಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net