ಮಳೆಗೆ ಜನ ಜೀವನ ಅಸ್ತವ್ಯಸ್ತ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

080922 Raichur Heavy Rain Traffic Jam
ರಾಯಚೂರು ನಗರದ ಹತ್ತಿ ಮಾರುಕಟ್ಟೆ ಬಳಿ ಹೆದ್ದಾರಿಯಲ್ಲಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಯಿತು.
Published on

ರಾಯಚೂರು: ಬುಧವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆ ತುಂಬೆಲ್ಲ ನೀರು ಹರಿದಿದೆೆ. ಕೆಲವೆಡೆ ಮುಖ್ಯ ರಸ್ತೆಗಳು ಹಾಳಾಗಿ, ಜನರ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ನಗರದ ಹತ್ತಿ ಮಾರುಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ರೈಲ್ವೆ ಸೇತುವೆ ಕೆಳಭಾಗದಲ್ಲಿ ದೊಡ್ಡ ಗುಂಡಿ ನಿರ್ಮಾಣವಾಗಿ ಅದರಲ್ಲಿ ನೀರು ನಿಂತು ಗುಂಡಿ ಕಾಣದೇ ವಾಹನ ಸವಾರು ಬಿದ್ದು ಗಾಯಗೊಳ್ಳುವಂತಾಗಿದೆ. ಈ ರಸ್ತೆಯಲ್ಲಿ ಪ್ರತಿ ಮಳೆಗಾಲದಲ್ಲೂ ಸವಾರರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇಲ್ಲಿಯವರೆಗೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದಂತಾಗಿದೆ. ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿಡಿದು ಸಂಚರಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಾರಿ ವಾಹನಗಳು ಸರಕು ಸಾಗಣೆಗಾಗಿ ಓಡಾಡುತ್ತವೆ. ಜತೆಗೆ ನಗರದಲ್ಲಿರುವ ಹಲವು ಕಾರ್ಮಿಕರು ಈ ರಸ್ತೆ ಮೂಲಕವೇ ಕಾರ್ಖಾನೆಗಳಿಗೆ ಓಡಾಡುತ್ತಾರೆ. ಆದರೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net