

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ನಾಡ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ಅಗೌರವ ತೋರಿದ ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ಕಚೇರಿಯ ಸ್ಥಾನಿಕ ಅಧಿಕಾರಿ ಪರಶುರಾಮಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಗಬ್ಬೂರು ನಾಡ ಕಚೇರಿಯಲ್ಲಿ ಅಧಿಕಾರಿಗಳು ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಕುರಿತು ದೇವದುರ್ಗ ತಹಸೀಲ್ದಾ ರರಿಗೆ ಈಗಾಗಲೇ ದೂರು ನೀಡಲಾಗಿದೆ ಆದರೇ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸಂಘ ಸಂಸ್ಥೆಗಳು ಸೇರಿ ಅನೇಕ ಕಡೆಗಳಲ್ಲಿ ರಾಜ್ಯೋತ್ಸವ ಆಚರಿಸಬೇಕೆಂಬ ನಿಯಮವಿದ್ದು, ಗಬ್ಬೂರು ನಾಡ ಕಚೇರಿಯಿಂದ ಈ ನಿಯಮವನ್ನು ಉಲ್ಲಂಘಿಸಲಾಗಿದೆ. ಕೂಡಲೇ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್, ತಾಲೂಕಾಧ್ಯಕ್ಷರಾದ ನಂದಪ್ಪ ಮಡ್ಡಿ, ಜಿಲಾನಿ ಪಾಷಾ, ದುರುಗರಾಜ ವಟಗಲ್, ಲಕ್ಷ್ಮಣ ಬೋವಿ, ಡಿ.ಬಸನಗೌಡ, ಪ್ರ.ಕಾರ್ಯದರ್ಶಿ ರಾಮಕೃಷ್ಣ ಭಜಂತ್ರಿ, ಗುರುನಾಥ ರೆಡ್ಡಿ, ಬಸವರಾಜ, ಬಸ್ಸಣ್ಣ, ಬಂಡೇಶ ಸೇರಿದಂತೆ ಇತರರಿದ್ದರು.