ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಏಳು ವರ್ಷ ಸಜೆ

jail
Published on

ರಾಯಚೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಏಳು ವರ್ಷ ಕಠಿಣ ಕಾರಾವಾಸ ಶಿಕ್ಷೆ ವಿಧಿಸಿ ಸ್ಥಳೀಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ದೇವದುರ್ಗ ತಾಲೂಕು ಗ್ರಾಮವೊಂದರ ಬಾಲಕಿ ಮೇಲೆ 2017ರಲ್ಲಿ ಅಮರೇಶ ಎಂಬಾತ ಅತ್ಯಾಚಾರ ಎಸಗಿದ್ದ. ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಸಿಪಿಐ ಸಂಜೀವ್‌ಕುಮಾರ ತನಿಖೆ ನಡೆಸಿ, ಅಮರೇಶ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಆರ್.ನಾಗರಾಜ, ಸಾಕ್ಷಿ-ಪುರಾವೆ ಪರಿಶೀಲಿಸಿ ಅಪರಾಧಿಗೆ ಏಳು ವರ್ಷ ಕಠಿಣ ಕಾರಾವಾಸ, 50 ಸಾವಿರ ರೂ. ದಂಡ ಹಾಗೂ ಸಂತ್ರಸ್ತ ಬಾಲಕಿಗೆ 3.60 ಲಕ್ಷ ರೂ. ನೆರವು ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಪೋಕ್ಸೋ ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net