ರೋಹಿತ್ ಚಕ್ರತೀರ್ಥ ಬಂಧಿಸಲು ಕರವೇ ಆಗ್ರಹ

170622 Raichur Karave Protest
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಕರವೇಯಿಂದ ಮನವಿ ಸಲ್ಲಿಸಲಾಯಿತು.
Published on

ರಾಯಚೂರು: ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಕನ್ನಡ ಮಹನೀಯರನ್ನು ಅಪಮಾನ ಮಾಡಿರುವ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನು ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ರೋಹಿತ್ ಚಕ್ರತೀರ್ಥ ನಾಡಿನ ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಪಠ್ಯ ಪರಿಷ್ಕರಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ರಾಷ್ಟ್ರಕವಿ ಕುವೆಂಪು ಹಾಗೂ ಅನೇಕ ಮಹನೀಯರ ಪಠ್ಯ ಕೈಬಿಟ್ಟು, ಹಲವಾರು ವಿವಾದಾತ್ಮಕ ಅಂಶಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net