ಆ.21ಕ್ಕೆ ರುಪ್ಸಾದಿಂದ ಶಿಕ್ಷಕರ ದಿನಾಚರಣೆ: ಸಂಗಮೇಶ ಮಂಗಾನವರ್

IMG-20240919-WA0008
Published on

ರಾಯಚೂರು: ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ)ದ ವತಿಯಿಂದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸಂಚಾಲಕ ಸಂಗಮೇಶ ಮಂಗಾನವರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಸೆ.21ರಂದು ನಗರದ ಹೊರವಲಯದ ಯರಮರಸ್ ಕ್ಯಾಂಪ್‌ನ ಆಫ್‌ತಾಬ್ ಶಾದಿಮಹಲ್‌ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಎನ್.ಎಸ್ ಬೋಸರಾಜು ನೆರವೇರಿಸಲಿದ್ದು, ಸಂಸದ ಜಿ.ಕುಮಾರ್ ನಾಯಕ, ಶಾಸಕರಾದ ಬಸನಗೌಡ ದದ್ದಲ್, ಡಾ.ಶಿವರಾಜ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಮಂಜುಳಾ, ನರಸಿಂಹ, ಪ್ರಶಾಂತ, ಸತ್ಯನಾರಾಯಣ, ಆಶಾ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net