

ರಾಯಚೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ದಲಿತ ಸಂರಕ್ಷ ಸಮಿತಿ ವಿಭಾಗೀಯ ಅಧ್ಯಕ್ಷ ಎಲ್.ವಿ.ಸುರೇಶ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ಆಯೋಗ ವರದಿ ಸಲ್ಲಿಸಿ ಹಲವು ವರ್ಷಗಳಾದರೂ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಿರ್ಲಕ್ಷೃ ವಹಿಸಿವೆ. ಹರಿಹರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಜಾಥಾ ನಡೆಸಿ ಧರಣಿ ನಡೆಸಲಾಯಿತು. ಸಿದ್ಧರಾಮಯ್ಯ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವರದಿ ಜಾರಿ ಕುರಿತು ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದು ದೂರಿದರು. ಪದಾಧಿಕಾರಿಗಳಾದ ಸಿ.ಕೆ.ಯೇಸುರಾಜ್, ಜೆ.ಹನುಮಂತ, ಎಚ್.ರೆಡ್ಡಿ, ಶಿವಪುತ್ರ, ಸಿ.ಕೆ.ಕೆಂಚಪ್ಪ, ಹನುಮೇಶ ಭೇರಿ, ಉದಯ ಭಂಡಾರಿ ಇದ್ದರು.