ಬಾಕಿ ವೇತನ ಶೀಘ್ರ ಪಾವತಿಸಿ

281022 Raichur Hostel Workers Appeal
ರಾಯಚೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಹೇಶ ಪೋತೆದಾರಗೆ ಬಾಕಿ ಕರ್ನಾಟಕ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
Published on

ರಾಯಚೂರು: ಶಾಸನಬದ್ಧ ಸೌಲಭ್ಯಗಳನ್ನು ಖಾತ್ರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋತೆದಾರಗೆ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ವಿವಿಧ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಳೆದ 4 ತಿಂಗಳಿಂದ ವೇತನ ಬಾಕಿ ಉಳಿದಿದ್ದು, ಜೀವನ ನಡೆಸಲು ಆರ್ಥಿಕ ಸಂಕಷ್ಟ ಎದುರಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿನ ವೇತನ ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು. ಕಾಂರ್ಮಿಕರಿಗೆ ಪಿಎಫ್, ಇಎಸ್‌ಐ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ, ಉಪಾಧ್ಯಕ್ಷ ಅಣ್ಣಪ್ಪ, ಕಾರ್ಯದರ್ಶಿ ಗಾಯಿತ್ರಿ, ಜಂಟಿ ಕಾರ್ಯದರ್ಶಿ ಅಂಬಿಕಾ, ಪದಾಧಿಕಾರಿಗಳಾದ ಉಮಾದೇವಿ, ಮಹೇಶ್ವರಿ, ಅಶ್ವತ್ಥಾಮ, ಅಮರೇಶ, ಹುಲಿಗೆಪ್ಪ, ಹನುಮಂತ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net