

ರಾಯಚೂರು: ಜಿಲ್ಲಾ ಸವಿತಾ ಸಮಾಜ ನೌಕರರ ಸಂಘದಿಂದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿಜಯಭಾಸ್ಕರ್ ಇಟಗಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಸೆ.1ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಸಂಘದ 9ನೇ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದೆ ಅಂದು ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಎನ್.ಎಸ್ ಬೋಸರಾಜು ನೆರವೇರಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಡಾ.ಶಿವರಾಜ್ ಪಾಟೀಲ್, ಎಂಎಲ್‌ಸಿ ವಸಂತಕುಮಾರ್, ನೂತನ ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಸಾಜೀದ್ ಸಮೀರ್, ಪ್ರಮುಖರಾದ ಕೆ.ಶಾಂತಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
ಎಸ್‌ಎಸ್‌ಎಲ್‌ಸಿಯ 27, ಪಿಯುಸಿ 39, ಪದವಿಯ 8, ಎಂಬಿಬಿಎಸ್‌ನ 2 ಹಾಗೂ ಇಂಜಿನೀಯರಿಂಗ್‌ನ 4 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು. ಜತೆಗೆ ಸಮಾಜದ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್, ನರಸಿಂಹಮೂರ್ತಿ, ಗೋವಿಂದ, ಸುರೇಶ, ವೈ ರವಿಕುಮಾರ್, ರಮೇಶ್, ಗುರುರಾಜ್ ನರಸಿಂಹಲು ಸೇರಿದಂತೆ ಇತರರಿದ್ದರು.