ಮೀಸಲಾತಿ ಹೆಚ್ಚಳ ಅಧಿಸೂಚನೆ ಹೊರಡಿಸಿ

N. Raghuveera Nayak, Vice President, Hyderabad Karnataka Valmiki Nayak Sangh
ಎನ್.ರಘುವೀರ ನಾಯಕ, ಉಪಾಧ್ಯಕ್ಷ, ಹೈದರಾಬಾದ್ ಕರ್ನಾಟಕ ವಾಲ್ಮೀಕಿ ನಾಯಕ ಸಂಘ.
Published on

ರಾಯಚೂರು: ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ. ಆದರೆ ಅದನ್ನು ಶೀಘ್ರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕೆಂದು ಹೈದರಾಬಾದ್ ಕರ್ನಾಟಕ ವಾಲ್ಮೀಕಿ ನಾಯಕ ಸಂಘದ ಉಪಾಧ್ಯಕ್ಷ ಎನ್.ರಘುವೀರ ನಾಯಕ ಒತ್ತಾಯಿಸಿದರು.

30 ವರ್ಷಗಳಿಂದ ಮೀಸಲಾತಿ ಹೆಚ್ಚಳಕ್ಕಾಗಿ ನಡೆಸಿದ ಹೋರಾಟಕ್ಕೆ ಜಯ ದೊರೆತಿದ್ದು, ಸಮಾಜ ಗುರುಗಳಾದ ಪ್ರಸನ್ನಾನಂದಪುರಿ ಸ್ವಾಮೀಜಿ 200ಕ್ಕೂ ಹೆಚ್ಚು ದಿನಗಳ ಕಾಲ ನಡೆಸಿದ ಧರಣಿಗೆ ಸರ್ಕಾರ ಕೊನೆಗೂ ಮಣಿದಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿ ರಾಜಕೀಯ ಪಕ್ಷಗಳು ಮತ್ತು ಮುಖಂಡರು ಕ್ರೆಡಿಟ್ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಮೀಸಲಾತಿ ಹೆಚ್ಚಳ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದರಿಂದ ಅದು ಸಾಧ್ಯವಾಗಿದೆ ಎಂದರು. ಸಂಘದ ಪದಾಧಿಕಾರಿಗಳಾದ ರಮೇಶ ನಾಯಕ, ರಾಮಕೃಷ್ಣ ನಾಯಕ, ಬೋಳಬಂಡಿ ನಾಯಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net