ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ

19012021 RAICHUR ABVP PROTEST
Published on

ರಾಯಚೂರು: ರಾಜ್ಯದಲ್ಲಿನ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ವಿದ್ಯಾರ್ಥಿ ವೇತನ ಇನ್ನೂ ತಲುಪಿಲ್ಲ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಅರ್ಜಿ ಹಾಕಿರುವವರಿಗೆ ತಕ್ಷಣ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಕ್ಕೆ ಪ್ರವೇಶ ನೀಡಲಾಗುತ್ತಿದ್ದು, ಉಳಿದವರು ಪ್ರತಿನಿತ್ಯ ಗ್ರಾಮಗಳಿಂದ ಕಾಲೇಜಿಗೆ ಬರಲು ಸಮಸ್ಯೆ ಎದುರಾಗಿದೆ. ಕೂಡಲೇ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ತರಗತಿಗಳನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರ್‌ಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘಟನೆ ನಗರ ಸಂಚಾಲಕ ಬಸವಪ್ರಭು, ಪದಾಧಿಕಾರಿಗಳಾದ ಗಣೇಶ, ಭರತ್, ತಿಮೋತಿ, ರಮೇಶ, ಖದೀರ್, ಲಿಂಗರಾಜ, ಕಾಳೇರಾಮ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net