

ರಾಯಚೂರು: ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ ನಗರದ ಡಿಸಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಹಾಯಧನ, ಸಾಲ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡಲು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಹಣವಿದ್ದು, ಇದು ಬಡತನ ನಿವಾರಣೆಗಾಗಿ ಇರುವ ಹಣವಲ್ಲ. ಕೂಡಲೇ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಬಳಕೆ ಮಾಡುತ್ತಿರುವುದನ್ನು ತಡೆಯಬೇಕೆಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಡಿಸಿ ಕಚೇರಿಯ ಸ್ಥಾನಿಕ ಅಧಿಕಾರಿ ಪರಶುರಾಮ್‌ಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಜನಾರ್ಧನ ಹಳ್ಳಿಬೆಂಚಿ, ನೂರ್‌ಜಾನ್, ರಾಜಶೇಖರ್, ಬಸವರಾಜ್, ಶರಣಬಸವರೆಡ್ಡಿ, ಜಿ.ರಾಜು, ನಾಗರಾಜ್, ರಮೇಶ್, ಪವನ್ ಸೇರಿದಂತೆ ಇತರರಿದ್ದರು.