

ರಾಯಚೂರು: ಕೇಂದ್ರ ಬಿಜೆಪಿ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸುವ ಮೂಲಕ ಮುಸ್ಲಿಮರ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಜಿಲ್ಲಾ ಘಟಕದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ
ಬಿಜೆಪಿಯಿಂದ ರಾಜಕೀಯ ದುರುದ್ದೇಶದಿಂದ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸುವ ಮೂಲಕ ಮುಸ್ಲಿಮರ ಮೇಲೆ ಪ್ರಹಾರ ಮಾಡುತ್ತಿದೆ. ವಕ್ಫ್ ಪರವಾಗಿ ಅನೇಕ ಕಾಯ್ದೆಗಳನ್ನು ಜಾರಿಗೆ ತರಲಾಗಿದ್ದು, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಕಾನೂನುಗಳನ್ನು ಅನುಷ್ಠಾನಗೊಳಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿ ಪರಶುರಾಮ್‌ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಸಯಿದಾ ಸಾದಿಯಾ, ಜಿಲ್ಲಾಧ್ಯಕ್ಷ ಸೈಯದ್ ಇರ‌್ಫಾನ್ ಖಾದ್ರಿ, ಪ್ರಮುಖರಾದ ತೌಸೀಫ್ ಆಹ್ಮದ್, ಅಕ್ಬರ್ ಹುಸೇನ್ ನಾಗುಂಡಿ, ರಫೀಕ್ ಮೌಲಾನಾ, ಮರ್ಷದ್ ಜಾನಿ ಸಾಹೇಬ್ ಸೇರಿದಂತೆ ಇತರರಿದ್ದರು.