ಸುಳ್ಳು ಪ್ರಕರಣ ದಾಖಲಿಸಿ ಬಂಧನ

17082022 snd
Published on

ಸಿಂಧನೂರು: ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಣ್ಣ ಹನುಮಂತ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಿದ್ದು, ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ತಹಸಿಲ್ ಕಚೇರಿ ಶಿರಸ್ತೇದಾರ್ ಸಾದೀಕ್‌ಗೆ ಸಿಪಿಐ(ಎಂಎಲ್) ಲಿಬರೇಷನ್ ಬುಧವಾರ ಮನವಿ ಸಲ್ಲಿಸಿತು.
ಗ್ರಾಮದಲ್ಲಿ ನಡೆದ ಹಿಂಸಾಚಾರವನ್ನು ಸಮಿತಿ ಖಂಡಿಸುತ್ತದೆ. ಈ ಪ್ರಕರಣದಲ್ಲಿ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದಲಿತ ಮುಖಂಡ ಹಾಗೂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ. ಗಲಭೆ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಸಾಮರಸ್ಯ ಸ್ಥಾಪಿಸಲು ಶಾಂತಿ ಸಭೆ ನಡೆಸಬೇಕು.
ಗಲಭೆಯಲ್ಲಿ ಕೊಲೆಗೀಡಾದವರ ಕುಟುಂಬದವರಿಗೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು. ಪ್ರಕರಣವನ್ನು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು. ಇಂಥ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸಮಿತಿಯ ಸಂಚಾಲಕರಾದ ಬಸವರಾಜ ಕೊಂಡಿ, ಶ್ರೀನಿವಾಸ ಬುಕ್ಕನಹಟ್ಟಿ, ಆರ್.ಎಚ್.ಕಲಮಂಗಿ, ಮಹಾದೇವ ಅಮ್ಮಾಪುರ, ಮರಿಯಮ್ಮ, ಪೀರಮ್ಮ, ಅಮರಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net