ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಸಿಂಧನೂರು ನಗರದಲ್ಲಿ ನ.17ರಂದು ಪಿಡಿಒ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮವಾಗಿದೆ ಎಂದು ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಇತರೆ ಅಭ್ಯರ್ಥಿಗಳಿಗೆ ಗೊಂದಲ ಸೃಷ್ಠಿಸಿದ್ದಾರೆಂಬ ಕಾರಣಕ್ಕೆ ಅಭ್ಯರ್ಥಿಗಳ ವಿರುದ್ಧ ತರಾತುರಿಯಲ್ಲಿ ಕೇಸ್ ದಾಖಲಿಸಲಾಗಿದೆ. ಪರೀಕ್ಷಾ ಮುಖ್ಯಸ್ಥರ ತಪ್ಪಿಗಾಗಿ ಅಭ್ಯರ್ಥಿಗಳ ಮೇಲೆ ಕ್ರಮ ಕೈಗೊಳ್ಳುವುದು ಸರಿಯಲ್ಲ ಎಂದು ದೂರಿದರು.