ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ: ಸಂಸದ ಕುಮಾರ್ ನಾಯಕ ಸಲಹೆ

oplus_0
oplus_0
Published on

ರಾಯಚೂರು: ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಕಲ್ಯಾಣ ಕರ್ನಾಟಕ ಭಾಗದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ಕಾರ್ಯವನ್ನು ಎಸ್‌ಕೆಇಎಸ್ ಪ್ಯಾರಾಮೆಡಿಕಲ್ ಕಾಲೇಜು ಮಾಡುತ್ತಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.

ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅಬಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಗುರುವಾರ ಮಾತನಾಡಿ, ಹಿಂದುಳಿದ ಜಿಲ್ಲೆಯೆಂಬ ಹಣೆಪಟ್ಟಿಯನ್ನು ಹೊಂದಿರುವ ರಾಯಚೂರು ಜಿಲ್ಲೆಯಲ್ಲಿ ವೈದ್ಯಕೀಯ, ನರ್ಸಿಂಗ್ ಶಿಕ್ಷಣ ನೀಡುವ ಪ್ರತಿಷ್ಠಿತ ಸಂಸ್ಥೆಯಾಗಿರುವ ಎಸ್‌ಕೆಇಎಸ್ ಪ್ಯಾರಾಮೆಡಿಕಲ್ ಕಾಲೇಜು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಬೆಳೆಯಬೇಕು ಎಂದರು.

ವಿದ್ಯಾರ್ಥಿಗಳು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ, ಕಾಲೇಜಿಗೆ, ಶಿಕ್ಷಣ ಸಂಸ್ಥೆಗೆ ಹಾಗೂ ಪೋಷಕರಿಗೆ ಕೀರ್ತಿ ತರಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಹಿರೆಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ, ತಬಲಿಜ್ ಜಮಾತ್‌ನ ಮೌಲಾನಾ ನಿಜಾಮುದ್ದೀನ್ ರಶಾದಿ, ಕಲ್ವರಿ ಪಾಸ್ಟರ್ ಅಸೋಸಿಯೇಷನ್ ಅಧ್ಯಕ್ಷ ರೇವ್.ಜಾನ್ ವೆಸ್ಲಿ ಡೇವಿಡ್, ರಾಯಚೂರು ವಿವಿಯ ಕುಲಪತಿ ಹರೀಶ ರಾಮಸ್ವಾಮಿ, ಎಸ್‌ಕೆಇಎಸ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಬಾಬುರಾವ್ ಶೇಗುಣಸಿ, ಸೇಂಟ್ ಥಾಮಸ್ ಬೆಂಜಿಮನ್ ಕಾಲೇಜಿನ ಪ್ರಾಚಾರ್ಯ ಪ್ರೊ.ಬೆಂಜಿಮನ್ ಥಾಮಸ್, ಶಾಹೀನ್ ಕಾಲೇಜಿನ ಪ್ರಾಚಾರ್ಯ ಪ್ರೊ.ಆದೀಲ್ ಪ್ರಮುಖರಾದ ಪಂಡಿತ್ ನರಸಿಂಹಲು ವಡವಾಟಿ, ಬಸವರಾಜ್ ಕಳಸ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net