ಸಮಾಜ ಸೇವೆ ಮಾಡುವವರನ್ನು ಗೌರವಿಸಿ

Boseraju
Published on

ರಾಯಚೂರು: ಸಾಧಕರಿಗೆ ನೀಡುವ ಪ್ರಶಸ್ತಿಗಳು ಜನರಲ್ಲಿ ಸಮಾಜಮುಖಿ ಕೆಲಸ ಮಾಡಲು ಪ್ರೇರಣೆಯಾಗಲಿದೆ. ಸಂಘ ಸಂಸ್ಥೆಗಳು ಎಲೆಮರೆ ಕಾಯಿಯಂತೆ ಸಮಾಜ ಸೇವೆ ಮಾಡುವವರನ್ನು ಗುರುತಿಸಿ ಸನ್ಮಾನಿಸಬೇಕು ಎಂದು ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು ಹೇಳಿದರು.

ನಗರದ ಸುಖಾಣಿ ಕಾಲನಿಯಲ್ಲಿ ಗೃಹರಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಾಣೋಜಿ ಹಾಗೂ ಕರೊನಾ ವಾರಿಯರ್ಸ್‌ಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸಮಾಜಮುಖಿ ಕೆಲಸ ಮಾಡಿದ್ದಾರೆ. ಉತ್ತಮ ಸೇವೆ ಮಾಡುವರನ್ನು ಸಮಾಜ ಗೌರವಿಸುವ ಕೆಲಸ ಮಾಡಬೇಕು ಎಂದರು.

ನಗರಸಭೆ ಸದಸ್ಯ ಜಯಣ್ಣ , ಮಾಜಿ ಸದಸ್ಯ ಮಹ್ಮದ್ ಶಾಲಂ, ನಿವಾಸಿಗಳಾದ ರಾಜೇಶ, ಗೋವಿಂದ, ಕೆ.ಶಾಂತಪ್ಪ, ಜಿ.ಶಿವಮೂರ್ತಿ, ಲಕ್ಷ್ಮಣ ಮ್ಯಾದಾರ, ಲಕ್ಷ್ಮೀರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net