ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ: ಡಿಸಿ ನಿತೀಶ

IMG-20241127-WA0013
Published on

ರಾಯಚೂರು: ಪ್ರತಿ ದಿನ ಜಿಲ್ಲೆಯಲ್ಲಿ ನಾನಾ ಸಮಸ್ಯೆಗಳ ಮೇಲೆ ಪತ್ರಕರ್ತರು ತಮ್ಮ ವರದಿ ಮೂಲಕ ಬೆಳಕು ಚೆಲ್ಲುತ್ತಿದ್ದೀರಿ. ಒತ್ತಡ ನಿವಾರಣೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಅನುಕೂಲವಾಗಲಿದೆ ಎಂದು ಡಿಸಿ ಕೆ.ನಿತೀಶ ಹೇಳಿದರು.

ನಗರದ ಮಹತ್ಮಾಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ರಿಪೋಟರ್ಸ್‌ ಗೀಲ್ಡ್ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಿನ್ನೆಲೆ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಂಗಳವಾರ ಮಾತನಾಡಿ, ಕ್ರೀಡೆಗಳು ಮಾನಸಿಕ, ದೈಹಿಕ ಸದೃಢತೆಗೆ ಅನುಕೂಲವಾಗಲಿವೆ. ಸರ್ಕಾರ ಮತ್ತು ನಾಗರಿಕರ ನಡುವೆ ಸೇತುವೆಯಂತೆ ವರದಿಗಾರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಕರ್ತರು ತಮ್ಮ ಸ್ಪೂರ್ತಿದಾಯಕ ಕೆಲಸ ಮುಂದುವರೆಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸುರೇಶ ವರ್ಮಾ, ಡಿವೈಎಸ್ಪಿ ಪಿ.ಪ್ರಮಾಣನಂದ ಘೋಡ್ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಡಿ ವೀರೇಶ ನಾಯಕ, ಗೀಲ್ಡ್ ಅಧ್ಯಕ್ಷ ಚನ್ನಬಸವಣ್ಣ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net