ಮೊದಲ ದಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

28032022 Mudagal SSLC exam
Published on

ರಾಯಚೂರು: ಜಿಲ್ಲೆಯ 114 ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ನೋಂದಣಿ ಮಾಡಿಸಿರುವ 29,436 ವಿದ್ಯಾರ್ಥಿಗಳಲ್ಲಿ 1,107 ವಿದ್ಯಾರ್ಥಿಗಳು ಗೈರಾಗಿದ್ದರು.

ದೇವದುರ್ಗ ತಾಲೂಕಿನಲ್ಲಿ 192, ಲಿಂಗಸುಗೂರು 189, ಮಾನ್ವಿ 207, ಸಿಂಧನೂರು ತಾಲೂಕಿನಲ್ಲಿ 222 ವಿದ್ಯಾರ್ಥಿಗಳು ಗೈರಾಗಿದ್ದರು. ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಬುರ್ಕಾ ಮತ್ತು ಹಿಜಾಬ್ ತೆಗೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಬಾಲಕರ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಕೆಲವು ಪಾಲಕರು ಮಕ್ಕಳನ್ನು ಕೊಠಡಿಯೊಳಗೆ ಬಿಟ್ಟು ಬರುವುದಾಗಿ ಪಟ್ಟು ಹಿಡಿದಿದ್ದು, ಅದಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು. ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ ಮತ್ತು ಡಿಡಿಪಿಐ ವೃಷಭೇಂದ್ರಯ್ಯಸ್ವಾಮಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net