ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆ

sports raichur
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Published on

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಮಹಾತ್ಮಗಾಂಧೀ ಜಿಲ್ಲಾ ಕ್ರಿಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಮೇಲಾಟ(ಅಥ್ಲೆಟಿಕ್ಸ್) ಪಂದ್ಯಾವಳಿಯಲ್ಲಿ ತಾಲೂಕಿನ ಇಬ್ಬರು ವಿದ್ಯಾರ್ಥಿಗಳು ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

800 ಮೀಟರ್ ಓಟದಲ್ಲಿ ಯರಗೇರಾ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಲ್ಲೇಶ ಹಾಗೂ 400 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲೂಕಿನ ಯಕ್ಲಾಸಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ವಿದ್ಯಾಶ್ರೀ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಎರಡೂ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net