ಹುದ್ದೆಗಳಲ್ಲಿ ಶೇ.15 ಮೀಸಲು ಕೊಡಿ

23012023 raichur students protest
Published on

ರಾಯಚೂರು: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಲ್ಲಿ ಕೃಷಿ ತಾಂತ್ರಿಕ ಪದವೀಧರಿಗೆ ಶೇ.15 ಹುದ್ದೆಗಳನ್ನು ಮೀಸಲಿಡಬೇಕೆಂದು ಒತ್ತಾಯಿಸಿ ಕೃಷಿ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಲೇಜಿನಿಂದ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿದರು. ಕೃಷಿ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಸಂಘದಿಂದ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಸಿಲ್ಲ ಎಂದು ದೂರಿದರು.

ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೃಷಿ ತಾಂತ್ರಿಕ, ಆಹಾರ ತಂತ್ರಜ್ಞಾನ, ಬಿಎಸ್ಸಿ ಕೃಷಿ ಮಾರುಕಟ್ಟೆ, ಸಹಕಾರ, ಜೈವಿಕ ತಂತ್ರಜ್ಞಾನ ಪದವೀಧರರನ್ನು ಶೇ.15 ಆದ್ಯತೆಯೊಳಗೆ ಸೇರಿಸಲಾಗಿದೆ. ಆದರೆ, ಹುದ್ದೆಗಳಲ್ಲಿ ಪ್ರತ್ಯೇಕ ಶೇ.15 ಮಾನ್ಯತೆ ನೀಡಿ ತಿದ್ದುಪಡಿ ಅಧಿಸೂಚನೆ ಹೊರಡಿಸಬೇಕು. ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಾರದಿದ್ದರೆ ಪ್ರತಿಭಟನೆ ಮುಂದುವರಿಸುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net