ದೇವಸುಗೂರಿನಲ್ಲಿ ಅದ್ದೂರಿಯಾಗಿ ಜರುಗಿದ ಸೂಗುರೇಶ್ವರ ಜೋಡು ರಥೋತ್ಸವ

07 Shashi 04
Published on

ರಾಯಚೂರು: ತಾಲೂಕಿನ ದೇವಸುಗೂರಿನಲ್ಲಿ ಶ್ರೀ ಸೂಗುರೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆ ಶನಿವಾರ ಜೋಡು ರಥೋತ್ಸವ ಅದ್ದೂರಿಯಾಗಿ ಜರುಗಿತು.

ಬೆಳಿಗ್ಗೆ ಅಭಿಷೇಕ, ವಿಶೇಷ ಪೂಜೆ, ನೆರವೇರಿಸಲಾಯಿತು. ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿ ರಥದಲ್ಲಿಡಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ಭಕ್ತರ ಜಯಘೋಷದ ನಡುವೆ ಸಂಜೆ ರಥೋತ್ಸವ ನಡೆಸಲಾಯಿತು.

ಜೋಡು ರಥಗಳನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.

ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಎರಡು ರಥಗಳಿಗೆ ಪುಷ್ಪನಮನ ಸಲ್ಲಿಸಿದರು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಸೀರ್ ಅಹ್ಮದ್, ಎಸಿ ಗಜಾನನ ಬಾಲೆ, ತಹಸಿಲ್ದಾರ್ ಸುರೇಶ ವರ್ಮಾ ಸೇರಿದಂತೆ ದೇವಸ್ಥಾನ ಸಮಿತಿಯ ಪ್ರಮುಖರು, ಅರ್ಚಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net