

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರ ತೀರ್ಥರ ಮಧ್ಯಾರಾಧನೆ ನಿಮಿತ್ತ ಭಾನುವಾರ ತೀರ್ಥರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು.
ನಂತರ ಶ್ರೀ ಸುಯತೀಂದ್ರ ತೀರ್ಥರ ಭಾವಚಿತ್ರವಿಟ್ಟು ಸ್ವರ್ಣ ರಥೋತ್ಸವ ನೆರವೇರಿಸಲಾಯಿತು. ಇದಕ್ಕೂ ಮುಂಚೆ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಮೂಲ ರಾಮದೇವರ ಪೂಜೆ ನೆರವೇರಿಸಿ ಭಕ್ತರಿಗೆ ಫಲ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.