ಸೆ.12ಕ್ಕೆ ರಾಜ್ಯಾದಂತ ತಮಟೆ ಚಳುವಳಿ: ಹನುಮಂತಪ್ಪ ಕಾಕರಗಲ್

IMG_20240908_235202
Published on

ರಾಯಚೂರು: ಪರಿಶಿಷ್ಟ ಜಾತಿಯಲ್ಲಿರುವ ಒಳಮಿಸಲಾತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷೃವಹಿಸುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹನುಮಂತಪ್ಪ ಕಾಕರಗಲ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಪ.ಜಾ ಉಪಜಾತಿಗಳಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನಬದ್ಧ ಹಕ್ಕು ಇದೆ ಎಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿ ಒಂದು ತಿಂಗಳಾದರೂ ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸದೇ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸೆ.12ರಂದು ರಾಜ್ಯಾದಂತ ಬೃಹತ್ ತಮಟೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಹಲವು ವರ್ಷಗಳ ಕಾಲ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ವಿಶೇಷ ಒಳ ಮೀಸಲಾತಿಯನ್ನು ನೀಡುವಂತೆ ಹೋರಾಟಗಳು ನಡೆದಿದ್ದವು. ಇದೀಗ ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ನೀಡಲು ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಕೂಡಲೇ ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕುರುಮಂತೆಪ್ಪ ಕಟ್ಟಿಮನಿ, ರಾಮಣ್ಣ ಸಾಸಲಮರಿ, ಶಿವರಾಜ ರುದ್ರಾಕ್ಷಿ, ರಮೇಶ ಭೋಸ್ಲೆ, ಹನುಮೇಶ್, ಜಂಬಣ್ಣ, ಸುರೇಶ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net